Quantcast
Channel: Entertainment – KannadaDunia.com
Viewing all articles
Browse latest Browse all 14653

ಅಭಿನಯ ಚಕ್ರವರ್ತಿ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ಇಲ್ಲಿದೆ ಮಾಹಿತಿ

$
0
0

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಟ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಸುದೀಪ್ ಅವರಿಗೆ ‘ಅಭಿನವ ಭಾರ್ಗವ ವಿಷ್ಣುವರ್ಧನ್ ಪ್ರಶಸ್ತಿ’ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ವೀರಕಪುತ್ರ ಶ್ರೀನಿವಾಸ, ಪರಿಷತ್ ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿಗಳಾದ ವ.ಚ. ಚನ್ನೇಗೌಡ, ಡಾ. ರಾಜಶೇಖರ ಹತಗುಂದಿ, ಪ್ರಕಟಣಾ ವಿಭಾಗದ ರಾಜ್ಯ ಸಂಚಾಲಕ ಪದ್ಮರಾಜ ದಂಡಾವತಿ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದರು. 25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕವನ್ನು ‘ಅಭಿನವ ಭಾರ್ಗವ ವಿಷ್ಣುವರ್ಧನ್ ಪ್ರಶಸ್ತಿ’ ಒಳಗೊಂಡಿದೆ.


Viewing all articles
Browse latest Browse all 14653

Latest Images

Trending Articles



Latest Images

<script src="https://jsc.adskeeper.com/r/s/rssing.com.1596347.js" async> </script>